ಇಂದು ರಾಜ್ಯದ ಲೋಕಲ್ ವಾರ್ ಪ್ರಾರಂಭ..!
ಕರ್ನಾಟಕ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ನಡೆಯುತ್ತಿದೆ. ಕಾಂಗ್ರೆಸ್, ಜೆಡಿಎಸ್, ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯ ಅಖಾಡವಾಗಿದೆ.
ರಾಜ್ಯದ ಮೂರು ಮಹಾನಗರ ಪಾಲಿಕೆಗಳಾದ ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಸೇರಿ 102 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯುತ್ತಿದೆ. 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಸ್ಥಳಿಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದೆ. ಒಟ್ಟು 2634 ವಾರ್ಡ್ ಗಳಲ್ಲಿ ಕಣಕ್ಕೆ ಇಳಿದಿದ್ದಾರೆ. 9,121 ಅಭ್ಯರ್ಥಿಗಳಿದ್ದು, ಈ ಪೈಕಿ ನಗರಸಭೆಯ 12, ಪುರಸಭೆಯ 17 ವಾರ್ಡ್ ಗಳಲ್ಲಿ ಅವಿರೋಧ ಆಯ್ಕೆ ಮಾಡಲಾಗಿದೆ. ಪ್ರಕೃತಿ ವಿಕೋಪಕ್ಕೆ ತುತ್ತಾದ ಮಡಿಕೇರಿ ಸೇರಿದಂತೆ 3 ಪಟ್ಟಣ ಪಂಚಾಯತಿಗಳಲ್ಲಿ ಸ್ಥಳಿಯ ಸಂಸ್ಥೆ ಚುನಾವಣೆ ನಡೆಯುತ್ತಿಲ್ಲ.
Comments