ಖಡಕ್ ಆದೇಶ ಕೊಟ್ಟ ಸಿಎಂ ಕುಮಾರಸ್ವಾಮಿ..! ಯಾವ ವಿಚಾರಕ್ಕೆ ಗೊತ್ತಾ..?

ಸಿಎಂ ಕುಮಾರಣ್ಣನ ಸರ್ಕಾರ ಬಂದ ದಿನದಿಂದ ಸಮಾಜದ ಸ್ವಾಸ್ತ್ಯ ಕಾಪಾಡಲು ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದ್ದಾರೆ.ಅದೇ ಹಿನ್ನಲೆಯಲ್ಲಿ ಸಾಕಷ್ಟು ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಸಾಲ ವಸೂಲಿಗಾಗಿ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿ ಸಂಬಂಧಪಟ್ಟಅಧಿಕಾರಿಗಳಿಗೆ ರಾಜ್ಯ ಸರ್ಕಾರವನ್ನು ಸುತ್ತೋಲೆಯ ಆದೇಶವನ್ನು ಹೊರಡಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಯಾದ ಟಿ.ಎಂ.ವಿಜಯಭಾಸ್ಕರ್ ಅವರು ಎಲ್ಲ ಪ್ರಾದೇಶಿಕ ಆಯುಕ್ತರು, ಎಲ್ಲ ವಲಯಗಳ ಪೊಲೀಸ್ ಮಹಾನಿರೀಕ್ಷಕರು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಸುತ್ತೋಲೆಯನ್ನು ಈಗಾಗಲೇ ರವಾನಿಸಿದ್ದಾರೆ. ರಾಜ್ಯ ಸರ್ಕಾರವು ಸಣ್ಣ ರೈತರು, ಕಾರ್ಮಿಕರು ಹಾಗೂ ದುರ್ಬಲ ವರ್ಗದವರು ಖಾಸಗಿ ಲೇವಾದೇವಿದಾರರಿಂದ ಮಾಡಿರುವ ಸಾಲ ಮನ್ನಾ ಮಾಡುವ ಸಂಬಂಧ ಸುಗ್ರೀವಾಜ್ಞೆ ಮಂಡಿಸಲು ನಿರ್ಧಾರ ಮಾಡಿದೆ. ಇದರ ಬೆನ್ನಲ್ಲೇ ಖಾಸಗಿ ಲೇವಾದೇವಿದಾರರು ಸಾಲ ಪಡೆದುಕೊಂಡವರಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
Comments