ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ : ಮತ ಎಣಿಕೆ ಪ್ರಾರಂಭ

03 Sep 2018 9:31 AM | Politics
396 Report

ಶುಕ್ರವಾರ ನಡೆದ ಮೂರು ಮಹಾನಗರ ಪಾಲಿಕೆ, 102 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.8 ಗಂಟೆಗೆ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು, 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಮೈಸೂರು, ಶಿವಮೊಗ್ಗ, ತುಮಕೂರು ಮಹಾನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ ಸೇರಿದಂತೆ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ಚುನಾವಣೆ ನಡೆದಿದ್ದು, ಒಟ್ಟು 63.80 ರಷ್ಟು ಮತದಾನವಾಗಿತ್ತು. ಚುನಾವಣೆಯಲ್ಲಿ ಒಟ್ಟು 2634 ವಾರ್ಡ್ ಗಳಿಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಪಕ್ಷೇತರರು ಸೇರಿದಂತೆ 9121 ಅಭ್ಯರ್ಥಿಗಳು ಅಖಾಡಕ್ಕೆ ಇಳಿದಿದ್ದರು. ಇಂದು ಫಲಿತಾಂಶ ಪ್ರಕಟವಾಗಲಿದ್ದು ಅವರ ಭವಿಷ್ಯ ನಿರ್ಧಾರವಾಗಲಿದೆ.

Edited By

Manjula M

Reported By

Manjula M

Comments