ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನಲೆ: ಡಿಸಿಎಂ ಜಿ.ಪರಮೇಶ್ವರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹಿನ್ನಡೆ

ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಗಳ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದೆ..ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಪ್ರತಿಷ್ಠೆಯ ಕಣವಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾರು ಗೆಲ್ಲಲಿದ್ದಾರೆ ಅನ್ನೋದು ಇನ್ನೂ ಸ್ವಲ್ಪ ಹೊತ್ತಿನಲ್ಲಿ ಗೊತ್ತಾಗಲಿದೆ.
ದಾವಣಗೆರೆಯ ಹೊನ್ನಾಳಿ ಪಟ್ಟಣ ಪಂಚಾಯತಿಯ ಒಟ್ಟು 18 ಸ್ಥಾನಗಳಲ್ಲಿ ಬಿಜೆಪಿಗೆ 10 ರಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆಯ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್ 5, ಪಕ್ಷೇತರ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನೂ ಸಿದ್ದರಾಮಯ್ಯ ಕ್ಷೇತ್ರ ಬದಾಮಿಯಲ್ಲಿ ಕಾಂಗ್ರೆಸ್ ಗೆ ಆರಂಭಿಕ ಹಿನ್ನಡೆಯಾಗಿದ್ದು, ಬಿಜೆಪಿ 3 ರಲ್ಲಿ ಕಾಂಗ್ರೆಸ್ 1 ರಲ್ಲಿ ಮುನ್ನಡೆ ಸಾಧಿಸಿದೆ. ಡಿಸಿಎಂ ಪರಮೇಶ್ವರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಕೊರಟಗೆರೆಯಲ್ಲಿ ಇನ್ನು ಕಾಂಗ್ರೆಸ್ ಖಾತೆ ತೆರದಿಲ್ಲ ಜೆಡಿಎಸ್ 5 ರಲ್ಲಿ ಬಿಜೆಪಿ 1 ರಲ್ಲಿ ಮುನ್ನಡೆಯನ್ನು ಸಾಧಿಸಿದೆ.
Comments