ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್’ಗೆ ಸಿಕ್ಕ ಗೆಲುವು..! ಯಾವ್ಯಾವ ಕ್ಷೇತ್ರದಲ್ಲಿ ‘ಕೈ’ಗೆ ಮುನ್ನಡೆ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಸ್ಥಳೀಯ ಸಂಸ್ಥೆ ಚುನಾವಣೆಗಳ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು .ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಪ್ರತಿಷ್ಠೆಯ ಅಖಾಡವಾಗಿದೆ.
ಕಾಂಗ್ರೆಸ್ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪುರಸಭೆಯಲ್ಲಿ ಗೆಲುವು ಸಾಧಿಸಿದ್ದು, ಮತ ಎಣಿಕೆ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಬೈಲಹೊಂಗಲದಲ್ಲಿ ಒಟ್ಟು 19 ವಾರ್ಡ್ ಗಳಲ್ಲಿ ಕಾಂಗ್ರೆಸ್ 12 ರಲ್ಲಿ ಗೆಲುವನ್ನು ಸಾಧಿಸಿದೆ. ಬಿಜೆಪಿ 5 ರಲ್ಲಿ ಮತ್ತು 2 ಕಡೆ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗದಗ ರೋಣ ಪುರಸಭೆಯಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್ 15, ಬಿಜೆಪಿ 7, ಪಕ್ಷೇತರರು 1 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದು, ಗಜೇಂದ್ರಗಡ ಪುರಸಭೆಯಲ್ಲಿ ಕಾಂಗ್ರೆಸ್ 5, ಬಿಜೆಪಿ 17 ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.
Comments