ಲೋಕ ಸಭಾ ಚುನಾವಣೆಗೆ ಹೆಚ್ ಡಿ ದೇವೆಗೌಡರ ಅಖಾಡ ಫಿಕ್ಸ್..! ಯಾವ ಕ್ಷೇತ್ರ ಗೊತ್ತಾ..?

ಈಗಾಗಲೇ ಲೋಕಸಭೆಯ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಯಾರು ಯಾರು ಯಾವ ಯಾವ ಜಿಲ್ಲೆಯಿಂದ ಅಖಾಡಕ್ಕಿಳಿಯುತ್ತಾರೆ ಎಂಬುದು ಗೊಂದಲವನ್ನು ಸೃಷ್ಟಿಸಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದ ಸ್ಪರ್ಧಿಸುವಂತೆ ಈ ಹಿಂದೆಯೇ ಮನವಿ ಮಾಡಿಕೊಂಡಿರುವುದಾಗಿ ಸಾರಿಗೆ ಸಚಿವರಾದ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಸಿ.ತಮ್ಮಣ್ಣ, ಮಂಡ್ಯ ಜನರಿಗೆ ಹೆಚ್ ಡಿ ದೇವೇಗೌಡರ ಮೇಲೆ ಅಪಾರ ಪ್ರೀತಿ ಇದೆ. ಹೀಗಾಗಿ ದೇವೇಗೌಡರ ಬಳಿ ನಾವು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದೇವೆ. ಮಂಡ್ಯ ಜಿಲ್ಲೆಯ ಜನರ ಆಸೆ ಪೂರೈಸಿ ಎಂದು ಹೆಚ್.ಡಿ.ದೇವೇಗೌಡರ ಬಳಿ ಕೇಳಿಕೊಂಡಿದ್ದೇವೆ ಎಂದು ಸಾರಿಗೆ ಸಚಿವ ತಮ್ಮಣ್ಣ ತಿಳಿಸಿದ್ದಾರೆ. ಈ ಬಗ್ಗೆ ದೇವೇಗೌಡರು ಏನೂ ಹೇಳಿಲ್ಲ. ಮಂಡ್ಯದಿಂದ ಸ್ಪರ್ಧಿಸುವ ತೀರ್ಮಾನ ಗೌಡರಿಗೆ ಬಿಟ್ಟಿದ್ದು, ಅವರು ಬಂದರೆ ಸಂತೋಷ ಎಂದು ಡಿ.ಸಿ. ತಮ್ಮಣ್ಣ ಹೇಳಿದ್ದಾರೆ. ಈ ಬಗ್ಗೆ ಹೆಚ್ ಡಿ ದೇವೆಗೌಡರು ಯಾವ ರೀತಿಯ ತಿರ್ಮಾನ ತೆಗೆದುಕೊಳ್ಳುತ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.
Comments