ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ..! ಫಲಾನುಭವಿಗಳು ಯಾರು..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಈಗಾಗಲೇ ರಾಜ್ಯ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿ ರೈತರಿಗೆ, ಹೆಣ್ಣುಮಕ್ಕಳಿಗೆ ನೆರವಾಗುವ ಯೋಜನೆಗಳನ್ನು ಕೂಡ ತಂದಿದೆ.ಇದೀಗ ಮತ್ತೊಂದು ಯೋಜನೆಯನ್ನು ತರಲು ಮುಂದಾಗಿದೆ.
ಮೀಟರ್ ಬಡ್ಡಿ ಮತ್ತು ಮಧ್ಯವರ್ತಿಗಳ ದಂಧೆಯನ್ನು ತಪ್ಪಿಸಲು ರಾಜ್ಯ ಸರ್ಕಾರವು ಬಡವರ ಬಂಧು ಎನ್ನುವ ಯೋಜನೆಯನ್ನು ಜಾರಿಗೊಳಿಸುತ್ತಿದೆ ಇದರ ಕುರಿತು ಬೀದಿಬದಿ ವ್ಯಾಪಾರಿಗಳೊಂದಿಗೆ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿಡಿಯೋ ಸಂಭಾಷಣೆಯನ್ನು ನಡೆಸಿದರು. ಇನ್ನು ಸ್ವಲ್ಪ ದಿನಗಳಲ್ಲಿ 'ಬಡವರ ಬಂಧು ಯೋಜನೆ'ಗೆ ಚಾಲನೆ ನೀಡಲಿದ್ದೇವೆ. ಈ ಯೋಜನೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ತರಲಿದ್ದೇವೆ. ಈ ಯೋಜನೆ ಕಾರ್ಯರೂಪಕ್ಕೆ ತರಲು ಬ್ಯಾಂಕ್ ಗಳ ಜೊತೆ ಚರ್ಚೆ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ ಕೊಡುತ್ತೇವೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.
Comments