ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಫಿಕ್ಸ್..ಯಾರಿಗೆ ಯಾವ ಕ್ಷೇತ್ರ ಗೊತ್ತಾ..?ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಈಗಾಗಲೇ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದ್ದು ಕಾಂಗ್ರೆಸ್ ಪಕ್ಷವು ರಾಜ್ಯದ 9 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆಗೆ ಶನಿವಾರ ಮಹತ್ವದ ಸಭೆ ನಡೆಸಿದೆ. ಈ ವೇಳೆ ಗುಲ್ಬರ್ಗಾ, ರಾಯಚೂರು, ಚಿಕ್ಕೋಡಿ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಹಾಲಿ ಸಂಸದರ ಹೆಸರನ್ನು ಹೈಕಮಾಂಡ್‌ಗೆ ಸೂಚಿಸಲು ತೀರ್ಮಾನಿಸಲಾಗಿದೆ. ಉಳಿದ ಐದು ಕ್ಷೇತ್ರಗಳಿಗೆ 3-4 ಮಂದಿ ಅರ್ಹ ಸಂಭವನೀಯರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಗುಲ್ಬರ್ಗಾ ಲೋಕಸಭೆ ಕ್ಷೇತ್ರಕ್ಕೆ ಹಾಲಿ ಸಂಸದರಾದ ಮಲ್ಲಿಕಾರ್ಜುನ ಖರ್ಗೆ, ರಾಯಚೂರು ಕ್ಷೇತ್ರಕ್ಕೆ ಬಿ.ವಿ. ನಾಯಕ್, ಚಿಕ್ಕೋಡಿ-ಸದಲಗಾ ಕ್ಷೇತ್ರಕ್ಕೆ ಪ್ರಕಾಶ್ ಹುಕ್ಕೇರಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿ.ಕೆ. ಸುರೇಶ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಶಿಫಾರಸು ಮಾಡಲು ನಿರ್ಧರಿಸಲಾಯಿತು ಎಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗೆ ಅವಕಾಶ ನೀಡಬೇಕು. ಈ ಮೂಲಕ ಸತತ ಬಿಜೆಪಿ ಗೆಲುವಿನ ಮೂಲಕ ಬಿಜೆಪಿ ಭದ್ರಕೋಟೆಯಂತಿರುವ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಚರ್ಚೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಕೃಷ್ಣ ಅಥವಾ ರಾಮಲಿಂಗಾರೆಡ್ಡಿ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆಯನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ.
Comments