ಬಿಜೆಪಿ ವಿರುದ್ಧ ತೊಡೆ ತಟ್ಟಿದ ಸಿ ಎಂ..!

ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜ್ಯದ ಸಮಿಸ್ತ್ರ ಸರಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತಿದ್ದರೆ ಅದು ಹೇಗೆ ಸರ್ಕಾರವನ್ನು ಬೀಳುಸುತ್ತಾರೋ ನೋಡೇಬಿಡುತ್ತೇನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದಿಲ್ಲಿ ಸವಾಲು ಹಾಕಿದ್ದಾರೆ.
ರಾಜಕಾರಣ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದು ಜನಸಾಮಾನ್ಯರಿಗೆ ಅರ್ಥವಾಗುತ್ತಿದೆ. ಸರ್ಕಾರವನ್ನು ಅಸ್ತಿರಗೊಳಿಸಲು ಪ್ರತಿ ನಿತ್ಯ ವ್ಯರ್ಥ ಪ್ರಯತ್ನ ನಡೆಯುತ್ತಿವೆ. ಅದು ಎಲ್ಲಿಗೆ ಹೋಗಲಿದೆ ಎಂಬುದನ್ನು ಕಾದು ನೋಡಣ ಎಂದರು. ವಿರೋಧ ಪಕ್ಷಗಳನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ಪದೇ ಪದೇ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಇದರಿಂದ ಅವರು ಯಾವ ಸಾಧನೆ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ತಿರಗೊಳಿಸಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಉತ್ತರಿಸಿದರು.
ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಲ್ಲೇ ನಡೆಸಲಾಗುತ್ತದೆ ಯಾವುದೇ ಕಾರಣಕ್ಕೂ ಸ್ಥಳಾಂತರವಿಲ್ಲ ಎಂದ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
Comments