ರಾಜ್ಯ ರಾಜಕಾರಣದ ಬಗ್ಗೆ ಮತ್ತೊಂದು ಹೊಸ ಬಾಂಬ್ ಸಿಡಿಸಿದ ಎಚ್.ಡಿ ರೇವಣ್ಣ..!?

ಈಗಾಗಲೇ ಇರುವ ಸರ್ಕಾರವನ್ನು ಉರುಳಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯ ಸರ್ಕಾರವನ್ನು ಉರುಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂಬ ಆರೋಪದ ಬೆನ್ನಲೇ ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣ ಅವರು ಹೊಸ ಬಾಣವನ್ನು ಬಿಟ್ಟಿದ್ದಾರೆ.
ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ರಾಜ್ಯ ಬಿಜೆಪಿ ನಾಯಕರು ಕೇಂದ್ರ ನಾಯಕರಿಂದ .300 ಕೋಟಿ ಹಣ ಕೇಳಿದ್ದಾರೆ ಎಂದು ಹೊಸ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಮಸಲತ್ತು ನಡೆಸುತ್ತಿದ್ದಾರೆ. ಇದಕ್ಕಾಗಿ .300 ಕೋಟಿ ಹಣ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಯಾರು ಏನೇ ಮಾಡಿದರೂ ರಾಜ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಯಡಿಯೂರಪ್ಪ ಅವರ ಮುಖ್ಯಮಂತ್ರಿಯಾಗುವ ಆಸೆ ಫಲಿಸದು ಎಂದು ತಿಳಿಸಿದರು.
Comments