ಜಿಲ್ಲಾಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟು ಸೂಪರ್ ಸಿಎಂ ಆದ ಎಚ್.ಡಿ. ರೇವಣ್ಣ

ಸಮ್ಮಿಶ್ರ ಸರ್ಕಾರದಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿಎಂ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಮಂಡ್ಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳಿಗಿಂತ ಅವರ ಸಹೋದರ ರೇವಣ್ಣ ಅವರೇ ಹೆಚ್ಚು ಘರ್ಜನೆಯನ್ನು ಮಾಡಿದರು. ಉತ್ತರ ಕೊಡಲು ಹಿಂದೆ ಮುಂದೆ ನೋಡಿದ ಅಧಿಕಾರಿಗಳ ವಿರುದ್ಧ ರೇವಣ್ಣ ಕೆಂಡಾಮಂಡಲರಾದರು.
ಮಂಡ್ಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾದಂತಹ ಅಧಿಕಾರಿಗಳ ವಿರುದ್ಧ ಕಿಡಿಕಾರಿದಂತಹ ಹೆಚ್ ಡಿ ರೇವಣ್ಣ ಸೂಪರ್ ಸಿಎಂ ರೀತಿ 'ಸಭೆಗೆ ಬಾರದವರನ್ನು ಬಲಿ ಹಾಕಿ' ಎಂದು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆಯನ್ನು ಕೊಟ್ಟರು. ಮುಖ್ಯಮಂತ್ರಿಗಳು ಸಭೆ ನಡೆಸುತ್ತಾರೆ ಎಂದರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರು ಹಾಜರಾಗುತ್ತಾರೆ. ಯಾಕೆ ಈ ರೀತಿಯಾಗಿ ವರ್ತನೆ ಮಾಡುತ್ತಾರೆ. ನೀವು ಮೊದಲೇ ಈ ಆದೇಶ ನೀಡಿರಲಿಲ್ಲವೇ ಎಂದು ಪ್ರಶ್ನೆಯನ್ನು ಕೂಡ ಮಾಡಿದರು. ಸಭೆಗೆ ಬಾರದ ಯಾವುದೇ ಅಧಿಕಾರಿ ಇದ್ದರೂ ಮುಲಾಜು ಇಲ್ಲದೆ ಅವರ ಹೆಸರನ್ನು ಪಟ್ಟಿಮಾಡಿ ಅಮಾನತುಗೊಳಿಸಿ ಎಂದು ಸಿಎಂ ಕಾರ್ಯದರ್ಶಿ ಸೆಲ್ವಕುಮಾರ್ ಅವರಿಗೆ ಹೆಚ್ ಡಿ ರೇವಣ್ಣ ಆದೇಶವನ್ನು ನೀಡಿದರು.
Comments