ಅ.6ಕ್ಕೆ ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ..!?

ಮಾಜಿ ಸಿಎಂ ಸಿದ್ದರಾಮಯ್ಯ ಅ.2ರ ಬಳಿಕ ದೋಸ್ತಿ ಸರ್ಕಾರಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಅಂತ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಂದರ್ಭದಲ್ಲಿ ಅ.2ರ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೊದಲ ಬಾರಿ ಸಚಿವರಾಗಿ ನೇಮಕವಾದವರು ಎರಡು ವರ್ಷಗಳ ಕಾಲ ಸಚಿವರಾಗಿ ಕಾರ್ಯನಿರ್ವಹಿಸಲಿದ್ದು, ಎರಡನೇ ಬಾರಿ ಸಚಿವರಾಗಿ ಆಯ್ಕೆಯಾದವರು ಮೂರು ವರ್ಷಗಳ ಕಾಲ ಸಚಿವರಾಗಿ ಕೆಲಸ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಅವರು ನಿಗಮ ಮಂಡಳಿಗೂ ಕೂಡ ಅಂದೇ ನೇಮಕವಾಗಲಿದ್ದು, ಸಚಿವ ಸ್ಥಾನ ಸಿಗದೇ ಇರುವ ಶಾಸಕರಿಗೆ ನಿಗಮ ಮಂಡಳಿಗೆ ನೇಮಕ ಮಾಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯತಿಳಿಸಿದರು.
Comments