ಜನತಾದರ್ಶನದಲ್ಲಿ ಭಾಗಿಯಾದವರಿಗೆ ಶುಭ ಸುದ್ದಿ ನೀಡಿದ ಸಿಎಂ ಕುಮಾರಸ್ವಾಮಿ

ರಾಜ್ಯ ಸರ್ಕಾರವು ಈಗಾಗಲೇ ಜನ ಸಾಮಾನ್ಯರಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಇದೀಗ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಕೊಡಲು ಕುಮಾರಣ್ಣನ ಸರ್ಕಾರ ಮುಂದಾಗಿದೆ.
ತಾವು ಕೈಗೊಳ್ಳುವ 'ಜನತಾದರ್ಶನ'ದಲ್ಲಿ ಉದ್ಯೋಗ ಕೋರಿ ಅರ್ಜಿ ಸಲ್ಲಿಸಿದ್ದ ಅಂಗವಿಕಲರು ಮತ್ತು ಪದವೀಧರರಿಗೆ ಉದ್ಯೋಗ ಒದಗಿಸಲು ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಉದ್ಯೋಗ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರು ಮಾಹಿತಿ ನೀಡಿದರು. ತಾಂತ್ರಿಕ ಶಿಕ್ಷಣ ಪಡೆಯದ 2335 ಹಾಗೂ 863 ತಾಂತ್ರಿಕ ಶಿಕ್ಷಣ ಪಡೆದ ನಿರುದ್ಯೋಗಿಗಳು ತಮಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಎಲ್ಲರಿಗೂ ಉದ್ಯೋಗ ಮೇಳದಲ್ಲಿ ಉದ್ಯೋಗ ಒದಗಿಸಲಾಗುವುದು. ಜೊತೆಗೆ ಮೇಳದಲ್ಲಿ ಅರ್ಜಿ ಸಲ್ಲಿಸಿದವರಿಗೂ ಮುಂದಿನ ದಿನಗಳಲ್ಲಿ ಉದ್ಯೋಗ ದೊರಕಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ..
Comments