ರಾಮನಗರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಫಿಕ್ಸ್

03 Oct 2018 9:30 AM | Politics
13661 Report

ಈಗಾಗಲೇ ಉಪಚುನಾವಣೆಗೆ ಎಲ್ಲಾ ರೀತಿಯ ತಯಾರಿಗಳು ನಡೆಯುತ್ತಿವೆ. ರಾಮನಗರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಇಂದು ಅಭ್ಯರ್ಥಿ ಆಯ್ಕೆ ನಡೆಯಲಿದ್ದು, ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗುವ  ಎಲ್ಲಾ ರೀತಿಯ ಸಾಧ್ಯತೆಗಳಿವೆ  ಎಂದು ಹೇಳಲಾಗುತ್ತಿದೆ.

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿಯೃ ಅನಿತಾ ಕುಮಾರಸ್ವಾಮಿಯವರೇ ರಾಮನಗರ ಕ್ಷೇತ್ರದ ಅಖಾಡಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅವರನ್ನೇ ಆಯ್ಕೆ ಮಾಡುವುದು ಖಚಿತವಾಗಿದ್ದು, ಇಂದು ನಡೆಯುವ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಸಿಎಂ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ಮೇಲೆ ಅನಿತಾ ಕುಮಾರಸ್ವಾಮಿ ರಾಮನಗರ ಕ್ಷೇತ್ರಕ್ಕೆ ಹೆಚ್ಚಾಗಿ ಆಗಮಿಸದ್ದರು. ಸಭೆ ಸಮಾರಂಭಗಳು, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯಕರ್ತರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಹೀಗಾಗಿ ಬಹುತೇಕ ಅನಿತಾಕುಮಾರಸ್ವಾಮಿಯವರೇ ಕಣಕ್ಕಿಳಿಯಲಿದ್ದಾರೆ.

Edited By

Manjula M

Reported By

Manjula M

Comments