ಶೀಘ್ರದಲ್ಲಿಯೇ ಆಗಲಿದೆ ಜೆಡಿಎಸ್'ನ ಮತ್ತೊಂದು ಸರ್ಜರಿ..!
ರಾಜಕೀಯ ವಲಯದಲ್ಲಿ ಸಾಕಷ್ಟು ವಿಷಯಗಳು ಚರ್ಚೆಯಾಗುತ್ತಲೆ ಇರುತ್ತವೆ.ಶೀಘ್ರದಲ್ಲಿಯೇ ಪಕ್ಷದ ರಾಜ್ಯ ಪದಾಧಿಕಾರಿಗಳ ಬದಲಾವಣೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ವಿಶ್ವನಾಥ್ ಅವರು ಹೇಳಿದ್ದಾರೆ. ಪಕ್ಷದಲ್ಲಿ ಪದಾಧಿಕಾರಿಗಳ ಬದಲಾವಣೆ ಮಾಡುವ ಚಿಂತನೆ ಮೊದಲಿನಿಂದಲೂ ನಡೆದಿದ್ದು, ಇದನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಪಕ್ಷದ ಹೈಕಮಾಂಡ್ ಸಹ ಸಹಮತ ವ್ಯಕ್ತಪಡಿಸಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದಂತೆ ನಮ್ಮ ಪಕ್ಷದಲ್ಲಿ ಯಾವ ರಾಹು, ಕೇತುವೂ ಇಲ್ಲ. ಬಿಜೆಪಿಯಲ್ಲಿಯೇ ರಾಹು, ಕೇತುಗಳಿವೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಮಂಗಳವಾರ ನಡೆದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಗತ್ತಿನ ಸುತ್ತ ರಾಹು, ಕೇತುಗಳು ಸುತ್ತುತ್ತಿವೆ. ಯಡಿಯೂರಪ್ಪ ಹೇಳಿದಂತೆ ನಮ್ಮಲ್ಲಿ ರಾಹು, ಕೇತುಗಳಿಲ್ಲ. ಗ್ರಹಗಳ ಸತ್ಯಾಸತ್ಯತೆಯನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.. .ಏನೇ ಆದರೂ ಜೆಡಿಎಸ್ನ ಪದಾಧಿಕಾರಿಗಳ ಮೇಜರ್ ಸರ್ಜರಿ ಮಾತ್ರ ನಿಜಕ್ಕೂ ಮೆಚ್ಚುವಂತದ್ದು.
Comments