ಸಚಿವ ಸಂಪುಟ ವಿಸ್ತರಣೆಗೆ ಎದುರಾಗಿದೆ ಮತ್ತೊಂದು ವಿಘ್ನ..!?

ಸರ್ಕಾರ ರಚನೆಯಾಗಿ ತಿಂಗಳುಗಳೆ ಕಳೆಯುತ್ತಿದ್ದರೂ ಸಮ್ಮಿಶ್ರ ಸರ್ಕಾರಕ್ಕೆ ಅನೇಕ ವಿಘ್ನಗಳು ಎದುರಾಗುತ್ತಿವೆ. ಬಹು ದಿನಗಳಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂದಿಕೊಂಡಿದ್ದರು.ಅಕ್ಟೋಬರ್ 12 ರೊಳಗೆ ನೆರವೇರಬಹುದೆಂಬ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಅದರ ಮಧ್ಯೆ ಈಗ ಅದಕ್ಕೆ ಮತ್ತೊಂದು ವಿಘ್ನ ಎದುರಾಗಿದೆ.
ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶೀಘ್ರದಲ್ಲೇ ದಿನಾಂಕ ಘೋಷಿಸಲಿದೆ ಎಂದು ಹೇಳಲಾಗುತ್ತಿದ್ದು, ಒಂದು ವೇಳೆ ದಿನಾಂಕ ಘೋಷಣೆಯಾದರೆ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಲಿದೆ ಎಂದು ತಿಳಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾದ ಶಾಸಕರ ಸಂಖ್ಯೆ ಹೆಚ್ಚಾಗಿರುವ ಕಾರಣ, ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ವಂಚಿತ ಶಾಸಕರುಗಳು ಬಂಡಾಯದ ಬಾವುಟ ಹಾರಿಸಬಹುದೆಂಬ ಆತಂಕ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದ್ದು, ಉಪ ಚುನಾವಣೆಯ ಕಾರಣಕ್ಕೆ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾದರೆ ಸಮಾಧಾನದ ನಿಟ್ಟುಸಿರು ಬಿಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಂದು ವೇಳೆ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕಡಯಾದರೆ ಅವರಲ್ಲಿಯೇ ಮನಸ್ತಾಪಗಳು ಉದ್ಬವಿಸುವುದರಲ್ಲಿ ಯಾವುದೆ ಸಂಶಯವಿಲ್ಲ..
Comments