ಲೋಕಸಭಾ ಚುನಾವಣೆಗೆ ಕ್ಷೇತ್ರದ ಸುಳಿವು ಕೊಟ್ಟ ನಿಖಿಲ್ ಕುಮಾರಸ್ವಾಮಿ..! ಯಾವ ಕ್ಷೇತ್ರ ಗೊತ್ತಾ..?

ಈಗಾಗಲೇ ಲೋಕ ಸಭಾ ಚುನಾವಣೆಗೆ ಎಲ್ಲಾ ಸಿದ್ದತೆಗಳು ನಡೆಯುತ್ತಿರುವಾಗಲೇ ಕುಟುಂಬ ರಾಜಕಾರಣದ ವಿರುದ್ಧ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿರುವ ಹಿನ್ನಲೆಯಲ್ಲಿಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಆಸೆಯನ್ನು ಹೊರ ಹಾಕಿದ್ದಾರೆ ಎನ್ನಲಾಗಿದೆ.
ಮಂಡ್ಯ ನಗರದ ಗುತ್ತಲು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಕುಟುಂಬಕ್ಕೆ ಸಮಾಧಾನ ಹೇಳಲು ನಿಖಿಲ್ ಕುಮಾರಸ್ವಾಮಿ ಹೋಗಿದ್ದರು.. ರಾಮನಗರ ಅಥವಾ ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ ನಟನಾಗಿದ್ದ ನಿಖಿಲ್ ಇನ್ನುಮುಂದೆ ರಾಜಕಾರಣಿ ಕೂಡ ಆಗಲಿದ್ದಾರೆ.
Comments