ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಮಗಳು ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ..! ಕ್ಷೇತ್ರ ಯಾವುದು ಗೊತ್ತಾ..?

ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದು ಯಾರು ಯಾವ್ಯಾವ ಕ್ಷೇತ್ರದಿಂದ ಅಖಾಡಕ್ಕೆ ಇಳಿಯಲಿದ್ದಾರೆ ಎಂಬ ವಿಷಯದ ಬಗ್ಗೆ ಚರ್ಚೆಯಾಗುತ್ತಿದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣರವರ ಪುತ್ರಿ ಶಾಂಭವಿಯವರು ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಎಸ್.ಎಂ ಕೃಷ್ಣ ಅವರು ಸಕ್ರೀಯ ರಾಜಕೀಯಕ್ಕೆ ಗುಡ್ ಬೈ ಹೇಳುವುದಕ್ಕೆ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಮ್ಮ ರಾಜಕೀಯ ಜೀವನವನ್ನು ತಮ್ಮ ಮಗಳ ಮೂಲಕ ಮುಂದುವರೆಸುವುದಕ್ಕೆ ಎಸ್.ಎಂ ಕೃಷ್ಣ ಅವರು ತಮ್ಮ ಮಗಳನ್ನು ಮಂಡ್ಯದಿಂದ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಮಾಡುವಂತೆ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರ ಬಳಿಯಲ್ಲಿ ಮನವಿ ಮಾಡಿಕೊಂಡಿದ್ದು, ಅ ಕಡೆಯಿಂದ ಶಾಂಭವಿಯರ ಸ್ಪರ್ಧೆಗೆ ಸಕರಾತ್ಮವಾಗಿ ಸ್ಪಂದನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Comments