ನವೆಂಬರ್’ನಲ್ಲಿ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಚುನಾವಣೆ..!

ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ಹೃದಯಾಘಾತದಿಂದ ನಿಧನರಾದ ಹಿನ್ನಲೆಯಲ್ಲಿ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಮರು ಚುನಾವಣೆ ನಡೆಯಲಿದೆ. ರಮೀಳಾ ಉಮಾಶಂಕರ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಮುಂದಿನ ಆರು ತಿಂಗಳಿನ ಒಳಗೆ ಚುನಾವಣೆ ನಡೆಸಬೇಕು. ಹೀಗಾಗಿ ನವೆಂಬರ್ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಸೆಕ್ಷನ್ 72(ಡಿ) ಪ್ರಕಾರ ಮರು ಚುನಾವಣೆ ನಡೆಯಲಿದ್ದು, ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ನಡೆದ ಮಾದರಿಯಲ್ಲೇ ಚುನಾವಣೆ ನಡೆಯಲಿದ್ದು, ಒಂದು ವಾರದೊಳಗೆ ಪ್ರಾದೇಶಿಕ ಆಯುಕ್ತರಿಂದ ಅಧಿಸೂಚನೆ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Comments