ಲೋಕಸಭೆ ಚುನಾವಣೆಯಲ್ಲಿ ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದ ಶಾಸಕ..! ಯಾವ ಕ್ಷೇತ್ರ, ಶಾಸಕ ಯಾರು ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಎಲ್ಲಾ ಪಕ್ಷಗಳು ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿಜೆಪಿ ಗೆಲುವು ಖಂಡಿತಾ ಎಂದು ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಭವಿಷ್ಯ ನುಡಿದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಭವಿಷ್ಯ ನುಡಿದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಕೈಗೊಂಡ ರಣತಂತ್ರ ಯಶಸ್ವಿಯಾಗಿದ್ದು, ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಗೆ ರಣತಂತ್ರವು ರೂಪಿಸಿ ಕಲಬುರಗಿ, ರಾಯಚೂರು, ಬೀದರ್ ಜಿಲ್ಲೆಯ ಸಂಸದ ಸ್ಥಾನದಲ್ಲಿ ಬಿಜೆಪಿ ಗೆಲ್ಲುವ ತಯಾರಿ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದರು. ಇನ್ನು ಕಲಬುರಗಿ ಸಂಸದರಾದ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ನಿಲ್ಲಲು ಸರ್ವ ರೀತಿ ಸಶಕ್ತ ವ್ಯಕ್ತಿಗಳನ್ನು ಹುಡುಕಲಾಗಿದೆ. ಆದರೆ ಹೆಸರು ಬಹಿರಂಗಪಡಿಸುವುದಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷದ ವರಿಷ್ಠರು ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ ಎಂದು ಮಾಧ್ಯಮದವರ ಜೊತೆ ಹೇಳಿದ್ದಾರೆ.
Comments