ರಾಮನಗರ ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿಯ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದ ಸಿಎಂ ಹೆಚ್’ಡಿಕೆ

ಈಗಾಗಲೇ ಉಪಚುನಾವಣೆಗೆ ಎಲ್ಲಾ ರೀತಿಯ ತಯಾರಿಗಳು ನಡೆಯುತ್ತಿವೆ. ರಾಮನಗರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಇಂದು ಅಭ್ಯರ್ಥಿ ಆಯ್ಕೆ ನಡೆದಿದೆ. ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗುವುದು ಪಕ್ಕಾ ಆಗಿದೆ.
ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿಯವರೇ ರಾಮನಗರ ಕ್ಷೇತ್ರದ ಅಖಾಡಕ್ಕೆ ಇಳಿಯಲಿದ್ದಾರೆ ಎಂಬುದು ಖಚಿತವಾಗಿದೆ. ಅವರನ್ನೇ ಆಯ್ಕೆ ಮಾಡುವುದು ಖಚಿತವಾಗಿದ್ದು, ಇಂದು ನಡೆಯುವ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಸಿಎಂ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ಮೇಲೆ ಅನಿತಾ ಕುಮಾರಸ್ವಾಮಿ ರಾಮನಗರ ಕ್ಷೇತ್ರಕ್ಕೆ ಹೆಚ್ಚಾಗಿ ಆಗಮಿಸದ್ದರು. ಸಭೆ ಸಮಾರಂಭಗಳು, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯಕರ್ತರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಹೀಗಾಗಿ ಬಹುತೇಕ ಅನಿತಾಕುಮಾರಸ್ವಾಮಿಯವರೇ ಕಣಕ್ಕಿಳಿಯಲಿದ್ದಾರೆ.ಅನಿತಾ ಕುಮಾರಸ್ವಾಮಿ ಅವರು ಅಕ್ಟೋಬರ್ 11ರಂದು ನಾಮಪತ್ರ ಸಲ್ಲಿಸಲಿದ್ದಾರೆ.
Comments