ಲೋಕಸಭೆ ಚುನಾವಣೆ ಹಿನ್ನಲೆ: ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರ್ ಗೊತ್ತಾ..!?
ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಎಸ್ ವೈ ಪುತ್ರ ಬಿ.ವೈ ರಾಘವೇಂದ್ರ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಆದರೆ, ಕಾಂಗ್ರೆಸ್ ಪಕ್ಷದಿಂದ ಯಾರು ಅಖಾಡಕ್ಕೆ ಇಳಿಯುತ್ತಾರೆ ಎಂಬುದು ಅಂತಿಮವಾಗಿಲ್ಲ.
ಈಗಾಗಲೇ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಭದ್ರಾ ಕಾಡಾ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ಹೆಸರು ಸದ್ಯಕ್ಕೆ ಕೇಳಿ ಬರುತ್ತಿದೆ. ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನುವ ಚರ್ಚೆ ಶುರುವಾಗಿರುವಾಗಲೇ ಹೆಚ್.ಎಸ್. ಸುಂದರೇಶ್ ಹೆಸರು ಇದೀಗ ಬಹುತೇಕ ಚಾಲ್ತಿಯಲ್ಲಿದೆ.
Comments