ಬಿಗ್ ಬ್ರೇಕಿಂಗ್ : ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಶುರುವಾಗಿದೆ ಬಂಧನದ ಭೀತಿ..!?

ಲಕ್ಷ್ಮೀ ಹೆಬ್ಬಾಳ್ಕರ್ ಅವರು 2013 ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದ ಮೇಲೆ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
2013ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಹೆಬ್ಬಾಳ್ಕರ್ ಚುನಾವಣಾ ಆಯೋಗ ನಿಗದಿ ಮಾಡಿದ್ದ ಅವಧಿ ಮೀರಿ ಪ್ರಚಾರ ಮಾಡಿದರು. ಈ ಸಂಬಂಧವಾಗಿ ಚುನಾವಣಾ ಆಯೋಗವು ಲಕ್ಷ್ಮಿ ಹೆಬ್ಬಾಳ್ಕರ್ ಮೇಲೆ ದೂರು ದಾಖಲು ಮಾಡಿತ್ತು. ಇದೇ ವೇಳೇ ಈ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆ ಕೂಡ ನಡೆಯುತ್ತಿತ್ತು. ಎರಡು ಬಾರಿ ವಿಚಾರಣೆಗೂ ಹಾಜರಾಗುವಂತೆ ನ್ಯಾಯಾಲಯ ಅವರಿಗೆ ಸೂಚನೆಯನ್ನು ಕೂಡ ನೀಡಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಸಂಬಂಧವಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಆಕಸ್ಮಾತ್ ಜಾಮೀನು ರಹಿತ ವಾರೆಂಟ್ ಗೂ ಕೂಡ ಲಕ್ಷ್ಮೀ ಹೆಬ್ಬಾಳ್ಕರ್ ನ್ಯಾಯಾಲಯಕ್ಕೆ ಹಾಜರಾಗದೇ ಹೋದರೆ ಬಂಧನ ಭೀತಿ ಲಕ್ಷ್ಮೀ ಹೆಬ್ಬಾಳ್ಕರ್ ಎದುರಿಸಬೇಕಾಗುತ್ತದೆ.
Comments