ಶ್ರೀರಾಮುಲು ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಶಾಸಕ ತಿಪ್ಪೇಸ್ವಾಮಿ: ಶ್ರೀರಾಮುಲು ಶಾಸಕ ಸ್ಥಾನಕ್ಕೆ ಕುತ್ತು ಬರುತ್ತಾ..!?

ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ರಾಜಕೀಯ ವಲಯದಲ್ಲಿ ಹೊಸದೊಂದು ಬೆಳವಣಿಗೆಗ ಕಾರಣರಾಗಿದ್ದಾರೆ.. ತಿಪ್ಪೆಸ್ವಾಮಿಯವರು ಶ್ರೀರಾಮುಲು ನಾಯಕ ಜನಾಂಗದವರೇ ಅಲ್ಲ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿ ನಂತರ ಮಾತನಾಡಿದ ಅವರು, ಬಿ.ಶ್ರೀರಾಮುಲು ಕರ್ನಾಟಕದವರೇ ಅಲ್ಲ ಅಂತ ಹೇಳಿದ್ದು ಇದೀಗ ಆ ವಿಷಯ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಮಂಗಳವಾರ ಬಳ್ಳಾರಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದರು. ಇದೇ ಸಮಯದಲ್ಲಿ ಮಾತನಾಡಿದ ಅವರು ಶ್ರೀರಾಮುಲು ರಾಜಕೀಯ ಹಿತಾಸಕ್ತಿಗೆ ತಾವು ನಾಯಕ ಜನಾಂಗವರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ಆದರೆ ಅದು ಸತ್ಯಕ್ಕೆ ದೂರವಾದ ಮಾತು. ಅವರು ಸುಳ್ಳು ಪ್ರಮಾಣ ಪತ್ರಗಳನ್ನು ಪಡೆದಿದ್ದಾರೆ ಎಂದು ತಿಪ್ಪೆಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ ಸೋಲಲು ಶ್ರೀರಾಮುಲು ಒಬ್ಬರೇ ಸಾಕು ಅರೋಪ ಮಾಡಿದ್ದಾರೆ.
Comments