ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಎಚ್ಡಿಕೆ ಹೇಳಿದ್ದೇನು..?

ಲಿಂಗಾಯಿತ ಧರ್ಮದ ವಿಚಾರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಿಂದಿನ ಸರ್ಕಾರದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪವಾದಾಗ ನಾವು ಧಾರ್ಮಿಕ ಸಮಸ್ಯೆಗಳ ಬಗ್ಗೆ ಧಾರ್ಮಿಕ ಗುರುಗಳೇ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕೆಂದು ಹೇಳಿದ್ದಾಗಿ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ದಿ ಕುಮಾರಸ್ವಾಮಿ ಧರ್ಮದ ವಿಚಾರದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲಾರೆ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಳ್ಳಿ ಹಾಕಿದರು.
ಇನ್ನು ಎಚ್ ಡಿ ದೇವೇಗೌಡರು ಪ್ರತಿಕ್ರಿಯಿಸಿ ನಾನು ಈ ವಿಚಾರಕ್ಕೆ ಮದ್ಯೆ ಪ್ರವೇಶ ಮಾಡುವುದಿಲ್ಲ, ಇದರ ಬಗ್ಗೆ ಮೈತ್ರಿ ಸರಕಾರದ ನಾಯಕರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ಹೇಳಿದರೆ.
Comments