12 ವರ್ಷಗಳ ನಂತರ ಒಂದೇ ವೇದಿಕೆಯಲ್ಲಿ ಒಂದಾದ ಉಭಯ ಪಕ್ಷದ ನಾಯಕರು..! ಕಾರಣ ಏನ್ ಗೊತ್ತಾ..?
ಒಂದಾನೊಂದು ಕಾಲದಲ್ಲಿ ಒಂದೇ ಪಕ್ಷದಲ್ಲಿದ್ದಂತಹ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಯಾವುದೋ ಕಾರಣಕ್ಕೋ ಬೇರೆಯಾಗಿದ್ದರು.
ಸುಮಾರು ವರ್ಷಗಳಿಂದಲೂ ಕೂಡ ಸಮಯ ಸಿಕ್ಕಾಗಲೆಲ್ಲಾ ಪರಸ್ಪರರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಎರಡು ಪಕ್ಷದ ನಾಯಕರು ಇದೀಗ ನಡೆಯುತ್ತಿರುವ ಲೋಕಸಭಾ ಹಾಗೂ ವಿಧಾನಸಭಾ ಉಪ ಚುನಾವಣೆ ಸಲುವಾಗಿ ಹನ್ನೆರಡು ವರ್ಷಗಳ ನಂತರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದು, 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Comments