ಡಿ.ಕೆ. ಶಿವಕುಮಾರ್'ಗೆ ಬಿಗ್ ಶಾಕ್ : ಡಿಕೆಶಿ ವಿರುದ್ದ ಹೈಕಮಾಂಡ್ ಗೆ ದೂರು ನೀಡಿದ ನಾಯಕರು..!

ಡಿ ಕೆ ಶಿವಕುಮಾರ್ ಅವರು ಲಿಂಗಾಯತ ಧರ್ಮ ವಿಚಾರದಲ್ಲಿ ನೀಡಿರುವಂತಹ ಹೇಳಿಕೆ ವಿಷಯವಾಗಿ ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ಇದೀಗ ದೂರನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೆ ಹೋರಾಟಕ್ಕೆ ಬೆಂಬಲಿಸಿದ್ದಕ್ಕೆ ಡಿಕೆಶಿ ಕ್ಷಮೆ ಕೇಳಿದ್ದರು.ಇದಕ್ಕೆ ಕಾಂಗ್ರೆಸ್ ನ ಹಲವು ನಾಯಕರು ಆಕ್ಷೇಪವನ್ನು ಕೂಡ ಮಾಡಿದ್ದರು.. ಜೊತೆಗೆ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಲಿಂಗಾಯತ ಧರ್ಮ ಹೋರಾಟಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆಂಬಲಿಸಿತ್ತು. ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸನ್ನು ಕೂಡ ಮಾಡಲಾಗಿತ್ತು. ಸಂಪುಟ ಸಭೆಯಲ್ಲಿ ಶಿವಕುಮಾರ್ ಇದ್ದರು. ಈ ನಡುವೆ ಡಿಕೆಶಿ ತನ್ನ ವೈಯಕ್ತಿಕ ಪ್ರತಿಷ್ಠೆಗಾಗಿ ಇಂತಹ ಹೇಳಿಕೆಯನ್ನು ನೀಡಿದ್ದಾರೆ. ಇದರಿಂದ ಪಕ್ಷಕ್ಕೆ ಮುಜುಗರವಾಗಿದೆ ಎಂದು ಹೈಕಮಾಂಡ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Comments