ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಸಚಿವ ಹೆಚ್.ಡಿ ರೇವಣ್ಣ..!

ಈಗಾಗಲೇ ಚುನಾವಣ ಪ್ರಚಾರದ ಕಾವು ರಂಗೇರುತ್ತಿದೆ. ಮೈತ್ರಿ ಸರ್ಕಾರದ ಹಿನ್ನಲೆಯಲ್ಲಿ ಐದು ಕ್ಷೇತ್ರಗಳಲ್ಲೂ ಕೂಡ ಗೆಲುವು ನಮ್ಮದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ. ಈಗಾಗಲೇ ಮಂಡ್ಯ, ಬಳ್ಳಾರಿ, ಶಿವಮೊಗ್ಗ, ಜಮಖಂಡಿ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಹಾಸನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಲ್ಲಿ ಸಾಂಕೇತಿಕವಾಗಿ ನಾಲ್ಕು ಆಂಬ್ಯುಲೆನ್ಸ್ ವಾಹನಗಳನ್ನು ಸಾರ್ವಜನಿಕ ಸೇವೆಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದ ಸಂದರ್ಭದಲ್ಲಿ ಗೆಲುವು ನಮ್ಮದೆ.. ಮುಂದೆಯು ಕೂಡ ನಾವು ಈ ರೀತಿಯ ಕಾರ್ಯಗಳನ್ನು ಮಾಡುತ್ತಿರುತ್ತೇವೆ ಎಂದು ತಿಳಿಸಿದರು.
Comments