ಎಚ್ ವಿಶ್ವನಾಥ್ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ..!?
ಜೆಡಿಎಸ್ ಅಧ್ಯಕ್ಷರಾದ ಎಚ್ ವಿಶ್ವನಾಥ್ ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದಾರೆ. ಎಚ್ ವಿಶ್ವನಾಥ್ ಅವರು ಇತ್ತಿಚಿಗಷ್ಟೆ ಜೆಡಿಎಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಆದರೆ ಇದೀಗ ಅವರು ಅವರ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಎಚ್ ವಿಶ್ವನಾಥ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ಕಾರಣಕ್ಕಾಗಿ ಅವರು ರಾಜೀನಾಮೆ ಕೊಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ವೈದ್ಯರು ಹೇಳಿರುವ ಪ್ರಕಾರ ಎಚ್ ವಿಶ್ವನಾಥ್ ಅವರು ಇನ್ನೂ ಸ್ವಲ್ಪ ದಿನ ವಿಶ್ರಾಂತಿಯನ್ನು ಪಡೆಯಬೇಕು, ಹಾಗಾಗಿ ಉಪ ಚುನಾವಣೆಯ ಪ್ರಚಾರಕ್ಕೆ ಹೋಗುವುದು ಸಾಧ್ಯವಾಗುವುದಿಲ್ಲ. ಒಂದು ವಾರದಿಂದಲೂ ಕಿಡ್ನಿ ಸ್ಟೋನ್ ಸಮಸ್ಯೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಈ ತೊಂದರೆಯಿಂದ ನಾನು ಹೆಚ್ಚು ಎಲ್ಲೂ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ.. ಹೀಗಾಗಿ ಅಧ್ಯಕ್ಷ ಸ್ಥಾನದಲ್ಲಿ ಇರಬೇಕೋ ಬೇಡವೋ ಎಂಬ ಯಾವ ನಿರ್ಧಾರವನ್ನು ತೆಗೆದುಕೊಂಡಿಲ್ಲ.. ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆರೋಗ್ಯದ ಕಡೆ ಗಮನ ಹರಿಸಬೇಕು ಎಂದಿದ್ದಾರೆ.
Comments