ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಜೆಡಿಎಸ್ ಅಭ್ಯರ್ಥಿ ಎಲ್.ಆರ್ ಶಿವರಾಮೇಗೌಡ..! ಕಾರಣ..?

ಲೋಕಸಭಾ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿರುವ ಎಲ್‍ಆರ್.ಶಿವರಾಮೇಗೌಡ ಅವರು ಬಹಿರಂಗ ಸಭೆಯಲ್ಲಿ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ಸುಮಾರು 25 ವರ್ಷಗಳ ಹಿಂದೆ ನಡೆದ ಪತ್ರಕರ್ತನ ಗಂಗಾಧರ ಮೂರ್ತಿ ಕೊಲೆ ಪ್ರಕರಣ ನೆನೆದು ಲೋಕಸಭಾ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಎಲ್‍ಆರ್.ಶಿವರಾಮೇಗೌಡ ಕಣ್ಣೀರು ಹಾಕಿದ್ದಾರೆ.
ಪತ್ರಕರ್ತನ ಕೊಲೆ ಪ್ರಕರಣದಲ್ಲಿ ನನ್ನ ಮೇಲೆ ಸುಖಾ ಸುಮ್ಮನೆ ಆರೋಪ ಬಂದಿತ್ತು. ಆರೋಪ ಕೇಳಿ ಬಂದ ಬಳಿಕ ನಾನು ದೇವರಲ್ಲಿ ಕೇಳಿಕೊಂಡಿದ್ದೆ. ದೇವರೇ ನನಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ನಿಮಗೆ ಗೊತ್ತು. ಬೇರೆಯವರಿಗೆ ಗೊತ್ತಿಲ್ಲ. ಆದರೆ ನಾನು ನಿರಪರಾಧಿ ಎಂಬುದು ನಂತರ ಸಾಬೀತಾಯ್ತು ಎಂದು ತಮ್ಮ ಅಳಲನ್ನೂ ತೋಡಿಕೊಂಡರು..ಆದರೆ ಈಗ ಕೂಡ ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಎಲ್‍ಆರ್.ಶಿವರಾಮೇಗೌಡ ತುಂಬಿದ ಸಭೆಯಲ್ಲಿ ಕಣ್ಣೀರಾಕಿರುವ ಘಟನೆ ನಡೆದಿದೆ.
Comments