ಮೈತ್ರಿ ಸರ್ಕಾರದ ವಿರುದ್ದ ಬಿ ಎಸ್ ಯಡ್ಯೂರಪ್ಪ ಗುಡುಗು

ಉಪ ಚುನಾವಣೆ ದಿನದಿಂದ ದಿನಕ್ಕೆ ಹೊಸ ತಿರುವನ್ನು ಪಡೆದುಕೊಳ್ಳುತ್ತಿದ್ದು ಇಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಯೂರಪ್ಪ ನವರು ಬಾಗಲಕೋಟೆಯಲ್ಲಿ ಗುಡುಗಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಯವರು ಶಿವಮೊಗ್ಗದಲ್ಲಿ ಗೆದ್ದರೆ ಸರ್ಕಾರ ಉಳಿಯುತ್ತೆ ಅಂದಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಗೆಲ್ಲೋದು ನಾವೇ ಈ ಸರಕಾರ ಉಳಿಯಲ್ಲ, ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆ ಮತ ಹಾಕಿದರೆ ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಿದಂತೆ ಎಂದು ಬಾಗಲಕೋಟೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಮೈತ್ರಿ ಸರಕಾರದ ವಿರುದ್ಧ ಗುಡುಗಿದ್ದಾರೆ.
ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ರಾಜಕೀಯದ ಮುಖಂಡರು ಜಾತಿಯ ಕೆಸರೆರಚಾಟ ಶುರು ಮಾಡಿದ್ದಾರೆ.
Comments