ಇಂದು ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ..!

ಈಗಾಗಲೇ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಅದೇ ರೀತಿ ಅದಕ್ಕೆ ತಕ್ಕಂತೆ ಪ್ರಚಾರವು ಕೂಡ ನಡೆಯುತ್ತಿದೆ. ಆದರೆ ರಾಜ್ಯದ ಎರಡು ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಈ ಮೂರು ಪಕ್ಷಗಳ ನಾಯಕರು ಪ್ರಚಾರಕ್ಕಾಗಿ ಭಾರೀ ಕಸರತ್ತು ನಡೆಸುತ್ತಿದ್ದಾರೆ.
ಇಂದು ರಾಮನಗರದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರವನ್ನು ಮಾಡಲಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಪ್ರಚಾರ ನಡೆಸಲಿದ್ದಾರೆ. ಒಟ್ಟಾರೆ ಚುನಾವಣೆಯ ಎಂಬ ಯುದ್ದ ಮುಗಿದ ಮೇಲೆ ಅಧಿಕಾರದ ಚುಕ್ಕಾಣಿಯನ್ನು ಯಾರು ಹಿಡಿಯುತ್ತಾರೆ ಅನ್ನೋದನ್ನ ಕಾದು ನೋಡ ಬೇಕಿದೆ.
Comments