ಲೋಕಸಭಾ ಉಪಚುನಾವಣೆಯ ಹಿನ್ನಲೆ: 1 ಲಕ್ಷ ಮತ ಪಡೆದ ಜೆಡಿಎಸ್ ಅಭ್ಯರ್ಥಿ..!
ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು ಈಗಾಗಲೇ ಮತ ಎಣಿಕೆ ಕಾರ್ಯ ಪ್ರಾರಂಭಗೊಂಡಿದೆ. ಒಂದು ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ.
ಮಂಡ್ಯ ಲೋಕಸಭಾ ಉಪಚುನಾವನೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು, ಜೆಡಿಎಸ್ ಅಭ್ಯರ್ಥಿಯಾದ ಶಿವರಾಮೇಗೌಡ ಅವರು ಭರ್ಜರಿ ಮುನ್ನಡೆಯನ್ನು ಗಳಿಸಿದ್ದಾರೆ.. ಶಿವರಾಮೇಗೌಡ ಅವರು 1 ಲಕ್ಷ ಮತ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ 38 ಸಾವಿರ ಮತಗಳನ್ನು ಪಡೆದಿದ್ದಾರೆ. ಒಟ್ಟಾರೆ ಜೆಡಿಎಸ್ ಎಲ್ಲ ಕಡೆಗಳಲ್ಲೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ.
Comments