BSY ಗೆ ಅಧಿಕಾರ ಸಿಗದ ಹಿನ್ನಲೆಯ ರಹಸ್ಯ ಬಿಚ್ಚಿಟ್ಟ ಸಚಿವ ಜಮೀರ್ ಅಹ್ಮದ್..!

ಸಚಿವ ಜಮೀರ್ ಅಹ್ಮದ್ ಅವರು ಯಡಿಯೂರಪ್ಪರವರಿಗೆ ಯಾಕೆ ಅಧಿಕಾರ ಸಿಕ್ಕಿಲ್ಲ ಎಂಬ ಸ್ಫೋಟಕ ಮಾಹಿತಿಯನ್ನು ಬಿಟ್ಟಿಟ್ಟಿದ್ದಾರೆ. ಟಿಪ್ಪು ಜಯಂತಿಯನ್ನು ವಿರೋಧಿಸಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ಸಿಕ್ಕಿಲ್ಲ ಎಂದು ಸಖತ್ತಾಗಿಯೇ ಟಾಂಗ್ ಕೊಟ್ಟಿದ್ದಾರೆ.
ಇಂದು ನಗರರದಲ್ಲಿ ಮಾಧ್ಯಮದವರ ಜೊತೆ ಮಾತನಾಡುವ ಸಮಯದಲ್ಲಿ ಬಿಜೆಪಿ 2013ರಲ್ಲಿ ಟಿಪ್ಪು ಜಯಂತಿ ಆಚರಿಸಿಲ್ಲ. ಹೀಗಾಗಿಯೇ ಅವರು ಅಧಿಕಾರಕ್ಕೆ ಬರಲಿಲ್ಲ ಎಂದು ವ್ಯಂಗ್ಯವಾಡಿದರು. ಇನ್ನು ಬಿಜೆಪಿಯವರ ಟಿಪ್ಪು ಜಯಂತಿ ಆಚರಣೆ ಡ್ರಾಮ ಎಂದು ವ್ಯಂಗ್ಯವಾಡಿದ ಸಚಿವರು, ತಮ್ಮ ಮೊಬೈಲ್ ತೆಗೆದು ವಿಡಿಯೋ ತೋರಿಸಿ ಬಿಜೆಪಿಯವರು ಈಗ ಟಿಪ್ಪು ಜಯಂತಿ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಖಂಡಿಸಿದ್ದಾರೆ.
Comments