ಭಾವಿ ಮುಖ್ಯಮಂತ್ರಿ ಎಂಬ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಬಿಎಸ್ ಯಡಿಯೂರಪ್ಪ..!

ರಾಜಕೀಯದ ಚದುರಂಗದ ಆಟದಲ್ಲಿ ಯಾರು ಯಾವಾಗ ಸೈನಿಕರನ್ನು ಉರುಳಿಸಿ ತಲೆ ಎತ್ತಿ ನಿಲ್ಲುತ್ತಾರೋ ಗೊತ್ತಿಲ್ಲ.. ಆದರೆ ವಿಧಾನ ಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಮೇಲೆ ಸಮ್ಮಿಶ್ರ ಸರ್ಕಾರ ರಚನೆಯಾಯಿತ್ತು.. ಈ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಆದರೆ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ವಿರೋಧ ಪಕ್ಷಗಳು ಸಾಕಷ್ಟು ಕಷ್ಟ ಪಟ್ಟವು. ಮುಂದಿನ ಮುಖ್ಯಮಂತ್ರಿ ನಾನೇ ಎಂದು ಯಡಿಯೂರಪ್ಪನವರು ಹೇಳುತ್ತಿದ್ದರು..
ಆದರೆ ಇದೀಗ ಪದೇ ಪದೇ ಭಾವಿ ಮುಖ್ಯಮಂತ್ರಿ ಎಂದು ಕರೆಯಬೇಡಿ ಎಂಬ ಹೇಳಿಕೆ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಮರ್ಥನೆ ಮಾಡಿಕೊಂಡಿದ್ದಾರೆ. ಹಾಗೆಂದ ಮಾತ್ರಕ್ಕೆ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ದೂರ ಸರಿದಿದ್ದೇನೆ ಎಂದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕಾಂಗ್ರೆಸ್ - ಜೆಡಿಎಸ್ ನವರು ಅವರಾಗಿಯೇ ಬಡಿದಾಡಿಕೊಂಡು ಸತ್ತರೆ ನಾವು ಖಂಡಿತಾ ಸರ್ಕಾರ ರಚಿಸುತ್ತೇವೆ. ಅಲ್ಲಿಯವರೆಗೂ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತೇವೆ. ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. ನನ್ನನ್ನು ಭಾವಿ ಮುಖ್ಯಮಂತ್ರಿ ಎಂದು ಕರೆಯಬೇಡಿ ಎಂದಿದ್ದಾರೆ.
Comments