ಸಾಲ ಮನ್ನಾಗೆ ಗಡವು ಕೊಟ್ಟ ಎಚ್ ಡಿ ಕೆ
ಬೀದರ್ ನಲ್ಲಿ ನಡೆದ 65 ನೇ ಅಖಿಲ ಭಾರತ ಸಹಕಾರ ಸಪ್ತಾಹ 2018 ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವು ಈಗಾಗಲೇ ಘೋಷಣೆ ಮಾಡಿರುವ ಸಹಕಾರ ಸಂಘಗಳ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳ ಒಟ್ಟು 45 ಸಾವಿರ ಕೋಟಿ ಸಾಲ ಮನ್ನಾ ಪ್ರತಿಕ್ರಿಯೆ 2019 ಜೂನ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರೆ.
ರೈತರ ಸಾಲ ಮನ್ನಾ ಮಾಡಲು ನಾನು ನಾಲ್ಕು ವರ್ಷಗಳ ಸಮಯ ಕೇಳಿಲ್ಲ. ಫೆಬ್ರವರಿಯಲ್ಲಿ ಮಂಡನೆ ಮಾಡಲಿರುವ ಬಜೆಟ್‌ನಲ್ಲಿ ಅಗತ್ಯ ಹಣಕಾಸು ವ್ಯವಸ್ಥೆ ಮಾಡಿಕೊಂಡು ಪ್ರಕಟಿಸುತ್ತೇವೆ. ಬರುವ ಜೂನ್‌ವರೆಗೆ ಪ್ರತಿ ತಿಂಗಳು ಬ್ಯಾಂಕ್‌ಗಳಿಗೆ ಹಣ ಬಿಡುಗಡೆ ಮಾಡುತ್ತೇವೆ. ಈಗ ಸಹಕಾರ ಬ್ಯಾಂಕುಗಳು ಜುಲೈನಿಂದ ಅಕ್ಟೋಬರ್ ತಿಂಗಳವರೆಗೆ ಸಾಲ ಪಡೆದ ರೈತರ ವಿವರ ಸಲ್ಲಿಸಿರುವ ಆಧಾರದ ಮೇಲೆ 1300 ಕೋಟಿ ರು. ಸಾಲ ಮನ್ನಾ ಹಣವನ್ನು ನವೆಂಬರ್ ಅಂತ್ಯದೊಳಗಾಗಿ ಬ್ಯಾಂಕಿಗೆ ಬಿಡುಗಡೆಗೆ ತೀರ್ಮಾನ ಕೈಗೊಂಡಿದ್ದೇವೆ ಎಂದರು.
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 21 ಲಕ್ಷ ರೈತ ಕುಟುಂಬಗಳ 2 ಲಕ್ಷ ರು.ಗಳವರೆಗಿನ ಸಾಲ ಮನ್ನಾ ನಿರ್ಧಾರ ಜಾರಿ ಕುರಿತಂತೆ ಬರುವ 20 ದಿನಗಳಲ್ಲಿ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತಾಗಿ ಆರೂವರೆ ಸಾವಿರ ಕೋಟಿ ರು.ಗಳನ್ನು ಬಜೆಟ್‌ನಲ್ಲಿಯೇ ಹಣ ಇಟ್ಟಿದ್ದು ಸರ್ಕಾರಕ್ಕೆ ಹಣದ ಕೊರತೆ ಇಲ್ಲ ಎಂದರು.
ಸಾಲ ಮನ್ನಾ ಕುರಿತು ಯಾವುದೇ ರೈತರು ಆತಂಕ ಪಡಬೇಕಿಲ್ಲ , ಇದಕ್ಕಾಗಿಯೇ ಸರ್ಕಾರ ಒಬ್ಬ ಐಎಎಸ್ ಅಧಿಕಾರ ಮತ್ತು ಇಬ್ಬರು ಸಹಾಯಕ ಆಯುಕ್ತರ ಸಮಿತಿಯೊಂದನ್ನು ರಚಿಸಲಾಗಿದ್ದು ಸಾಲ ಮನ್ನಾದ ಮಾಹಿತಿ ಪಡೆಯಲು ಸೂಚಿಸಲಾಗಿದೆ. ಸಿದ್ದರಾಮಯ್ಯ ಅವರ ಕಾಲದ ಸಾಲ ಮನ್ನಾ ಹಣದ ಪೈಕಿಯ ಬಾಕಿ ಹಣವನ್ನು ಸಂಪೂರ್ಣವಾಗಿ ಬ್ಯಾಂಕ್‌ಗಳಿಗೆ ಭರಿಸಲಾಗಿದೆ. ಆದರೆ ಬಿ.ಎಸ್.ಯಡಿಯೂರಪ್ಪ ಅವರು ಜನತೆಗೆ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.
Comments