ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿದ ಎಚ್ಚರಿಕೆ ಏನು..?
ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ ಬಾಕಿ ಮೊತ್ತಕ್ಕೆ ಸಂಬಂಧಿಸಿದಂತೆ ಉದ್ಭವವಾಗಿರುವ ಸಮಸ್ಯೆಯನ್ನು ರೈತರೊಂದಿಗೆ ಚರ್ಚಿಸಿ ಸಮನ್ವಯ ಸಾಧಿಸಿಕೊಂಡು 15 ದಿನಗಳಲ್ಲಿ ಇತ್ಯರ್ಥ ಪಡಿಸಿಕೊಳ್ಳುವಂತೆ ಸಕ್ಕರೆ ಕಾರ್ಖಾನೆ ಮಾಲಿಕರಿಗೆ ರಾಜ್ಯ ಸರ್ಕಾರ ತಾಕೀತು ಮಾಡಿದೆ.
ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ. ಯಾವುದೇ ರೀತಿಯ ಗೊಂದಲಕ್ಕೆ ಎಡೆ ಮಾಡದಂತೆ ರೈತರೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಬಗೆಹರಿಸುವಂತೆ ಮಾಲೀಕರಿಗೆ ಸೂಚನೆ ನೀಡಿದರು. ಈಗಾಗಲೇ ಕಟಾವಿಗೆ ಸಿದ್ಧವಿರುವ ಕಬ್ಬನ್ನು ಅರೆಯಲು ರೈತರೊಂದಿಗೆ ಕ್ರಮ ಬದ್ಧ ಒಪ್ಪಂದ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರೈತರೊಂದಿಗೆ ಸಮನ್ವಯ ಸಾಧಿಸಿ ಕಬ್ಬು ಅರೆಯುವ ಪ್ರಕ್ರಿಯೆ ಮುಂದುವರಿಸಲು ಸೂಚಿಸಿದರು. ಪ್ರಸಕ್ತ ಹಂಗಾಮಿನಲ್ಲಿ ಇಂತಹ ಯಾವುದೇ ಗೊಂದಲವಾಗದಂತೆ ಎಚ್ಚರ ವಹಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಸೂಚಿಸಿದರು.. ಎಲ್ಲ ಸಕ್ಕರೆ ಕಾರ್ಖಾನೆ ಮಾಲೀಕರು ಕಡ್ಡಾಯವಾಗಿ ಎಫ್.ಆರ್.ಪಿ. ದರ ಪಾವತಿಸಬೇಕು. ಇದಕ್ಕೆ ಸರ್ಕಾರದ ಮಾರ್ಗಸೂಚಿಗಳಂತೆ ಪ್ರತಿ ರೈತನೊಂದಿಗೆ ಕಡ್ಡಾಯವಾಗಿ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಬೇಕು. ನಂತರ ಕಬ್ಬು ನಿಯಂತ್ರಣ ಮಂಡಳಿಯ ನಿರ್ಣಯಗಳಂತೆ ಆದಾಯ ಹಂಚಿಕೆ ಸೂತ್ರ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.. ಇದಲ್ಲದೆ ರೈತರಿಗೆ ತೂಕ ಹಾಗೂ ಇಳುವರಿ ಪ್ರಮಾಣ ನಿಗದಿಯಲ್ಲಿ ಪಾರದರ್ಶಕತೆ ತರಲು ಸರ್ಕಾರ ಹೊರಡಿಸುವ ಸುತ್ತೋಲೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದರು.
Comments