ಹಾಸನ ಜಿಲ್ಲೆಗೆ ಸಿಕ್ತಿದ್ಯಾ ಮತ್ತೊಂದು ಸಚಿವ ಸ್ಥಾನ…? ಈ ಬಗ್ಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?

ರಾಜ್ಯ ಸಚಿವ ಸಂಪುಟ ವಿಸ್ತರಣೆಗಾಗಿ ಸಚಿವರು ಕಾಯುತ್ತಾ ಕುಳಿತಿದ್ದಾರೆ. ಯಾವಾಗ ಸಚಿವ ಸಂಪುಟ ವಿಸ್ತರಣೆ, ಯಾರಿಗೆ ಯಾವ ಸ್ಥಾನ ಸಿಗುತ್ತದೆ ಎಂಬುದನ್ನು ಕೂಡ ಕಾಯುತ್ತಿದ್ದಾರೆ. ಶೀಘ್ರದಲ್ಲಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ..
ವಿವಿಧ ಮುಖಂಡರು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಸ್ಥಾನ ಹಂಚಿಕೆ ನಿಟ್ಟಿನಲ್ಲಿ ಮುಖಂಡರುಗಳು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣಗೆ ಸಚಿವ ಸ್ಥಾನ ನೀಡಲಾಗಿದ್ದು, ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಲು ಆಗ್ರಹ ಕೇಳಿ ಬಂದಿದೆ. ವಿವಿಧ ದಲಿತ ಸಂಘಟನೆಗಳಿಂದ ಆಗ್ರಹಿಸಿದ್ದು, ಆಲೂರು-ಸಕಲೇಶಪುರ ಮೀಸಲು ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್.ಕೆ. ಕುಮಾರ ಸ್ವಾಮಿಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
Comments