ಸಭಾಪತಿ ಸ್ಥಾನಕ್ಕೆ ದೋಸ್ತಿ ಸರ್ಕಾರದಿಂದ ಕೇಳಿ ಬಂತು ಅಚ್ಚರಿ ಹೆಸರು..? ಯಾರ್ ಗೊತ್ತಾ..?

ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿ ನಾಯಕರ ನಡುವಿನ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕಾಗಿ ಪೈಪೋಟಿ ಅಂತಿಮ ಹಂತಕ್ಕೆ ಬಂದಿದೆ.. ಎಸ್.ಆರ್. ಪಾಟೀಲ್ ಅವರನ್ನ ಸಭಾಪತಿ ಮಾಡಲು ಕಾಂಗ್ರೆಸ್ ನಲ್ಲಿ ಸಾಕಷ್ಟು ಚೆರ್ಚೆಗಳು ನಡೆದಿದ್ದವು. ಆದ್ರೆ ಕೊನೆಗಳಿಗೆಯಲ್ಲಿ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿಯನ್ನ ಫೈನಲ್ ಮಾಡಿದೆ.
ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದ್ದು, ನಾಯಕರ ಸೂಚನೆ ಮೇರೆಗೆ ಪ್ರತಾಪ್ ಚಂದ್ರ ಶೆಟ್ಟಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಮೂಲಕ ಜೆಡಿಎಸ್ ಸಭಾಪತಿ ಹುದ್ದೆ ರೇಸ್ ನಿಂದ ಹಿಂದೆ ಸರಿದಿದ್ದು, ಪ್ರತಾಪ್ ಚಂದ್ರ ಶೆಟ್ಟಿ ಸಭಾಪತಿಯಾಗುವುದು ಬಹುತೇಕ ಖಚಿತವಾಗಿದೆ.. ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನೇ ಮುಂದುವರೆಸಲು ಜೆಡಿಎಸ್ ಪ್ಲ್ಯಾನ್ ಮಾಡಿತ್ತು ಎನ್ನಲಾಗಿದೆ.
Comments