ಸಚಿವ ಸಂಪುಟದಲ್ಲಿ ಸ್ಥಾನ ಕಳೆದುಕೊಳ್ಳಲಿದ್ದಾರಾ ಸಚಿವರು..?
ಸಮ್ಮಿಶ್ರ ಸರ್ಕಾರದಲ್ಲಿ ಸದ್ಯಕ್ಕೆ ಶಾಸಕರಲ್ಲಿ ಯಾವುದೇ ರೀತಿಯ ಒತ್ತಡ ಇಲ್ಲ. ಸಚಿವ ಸಂಪುಟ ವಿಸ್ತರಣೆ ವೇಳೆ ಯಾರು ಇರಬೇಕು, ಯಾರು ಇರಬಾರದು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ..
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಸಂಪುಟ ವಿಸ್ತರಣೆ ವೇಳೆ ಕೆಲವರನ್ನು ಸಂಪುಟದಿಂದ ಕೈಬಿಟ್ಟರೆ ಏನು ಮಾಡುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.. ಸಂಪುಟದಲ್ಲಿ ಹೊಸ ರಕ್ತ, ಹಳೆಯ ರಕ್ತ ಎರಡೂ ಇರಲಿ ಬಿಡಿ. ಇದು ಒಳ್ಳೆಯ ಬೆಳವಣಿಗೆ ಎಂದರು. ಜೆಡಿಎಸ್ನವರು ಕಾಂಗ್ರೆಸ್ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ.
Comments