ದೋಸ್ತಿ ಸರ್ಕಾರದ ಸಚಿವ ಸಂಪುಟದಿಂದ ನಾಲ್ವರಿಗೆ ಕೋಕ್..!?ಯಾರ್ಯಾರು ಗೊತ್ತಾ..?

ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಮುಂದೆ ಹೋಗುತ್ತಲೇ ಇದೆ.. ಶುಕ್ರವಾರ ಬೆಳಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಹೈಕಮಾಂಡ್ ಪ್ರಮುಖ ಜೊತೆಗೆ ಮಾತುಕತೆ ನಡೆಸಿದ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಸಭೆ ನಡೆಯಲಿದೆ ಎನ್ನಲಾಗಿದೆ.
ಸಂಪುಟ ಸಭೆಗೆ ಪದೇ ಪದೇ ಗೈರಾಗುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂಬ ಒತ್ತಡ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದ್ದು, ರಮೇಶ್ ಜಾರಕಿಹೊಳಿ ಸೇರಿದಂತೆ ಸಚಿವರಾದ ಆರ್.ಶಂಕರ್, ವೆಂಕಟರಮಣಪ್ಪ, ಜಯಾಮಾಲ ಅವರನ್ನು ಕೈ ಬಿಡುವ ಸಾಧ್ಯತೆ ಇದೆ. ಇವರ ಬದಲಿಗೆ ಇದೇ ಸಮುದಾಯದ ಇತರರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.
Comments