ಬಿಗ್ ನ್ಯೂಸ್ : ಶಾಸಕ ಸ್ಥಾನಕ್ಕೆ ನಾನು ರಾಜೀನಾಮೇ ನೀಡುವುದು ಫಿಕ್ಸ್..!! ಹೀಗೆ ಹೇಳಿದ್ದು ಯಾರ್ ಗೊತ್ತಾ..?
ರಾಜಕೀಯದಲ್ಲಿ ಈಗಾಗಲೇ ಸಾಕಷ್ಟು ಕುತೂಹಲಕಾರಿ ವಿಷಯಗಳು ಚರ್ಚೆಯಾಗುತ್ತಿವೆ. ಸಚಿವ ಸಂಪುಟ ವಿಸ್ತರಣೆಯ ಸಲುವಾಗಿ ಸಾಕಷ್ಟು ಊಹಾಪೋಹಗಳು ಎದ್ದಿವೆ.. ಇದೆಲ್ಲದರ ನಡುವೆಯೇ ರಾಜೀನಾಮೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನಾನು ರಾಜೀನಾಮೇ ನೀಡುವುದು ಫಿಕ್ಸ್ ಆಗಿದ್ದು, ಭಾನುವಾರ ನಾನು ತೆಗೆದುಕೊಂಡಿರುವ ನಿರ್ಧಾರಕ್ಕೆ ಬದ್ದನಾಗಿರುವೆ ಅಂತ ಮಾಜಿ ಸಚಿವ, ಹಾಲಿ ಶಾಸಕ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಇದಕ್ಕೆಲ್ಲಾ ಕಾರಣ ಈ ಸಚಿವ ಸಂಪುಟ..?
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ರಮೇಶ್ ಜಾರಕಿಹೋಳಿ ನಾನು ರಾಜೀನಾಮೆ ನೀಡುವುದಕ್ಕೆ ಮುಂದಾಗಿದ್ದು, ಯಾವಾಗ ನೀಡಬೇಕು ಎನ್ನುವುದರ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು. ದೋಸ್ತಿ ಸರಕಾರದ ಸಚಿವ ಸಂಪುಟ ಪುನರ್ ರಚನೆ ವೇಳೆಯಲ್ಲಿ ರಮೇಶ್ ಜಾರಕಿಹೋಳಿಯವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿದ್ದು, ಇದರಿಂದ ಅವರು ಸಿಟ್ಟಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
Comments