ಜೆಡಿಎಸ್ ನ ಈ ಶಾಸಕರಿಗೆ ಸಿಕ್ತು ಪ್ರಬಲ ಖಾತೆ..!! ಯಾರು ಯಾವ ಖಾತೆ..?

ಸಚಿವ ಸಂಪುಟ ರಚನೆಯಾಗಿದ್ದು ಇದರಿಂದ ಸಾಕಷ್ಟು ಗೊಂದಲಗಳು ಉಂಟಾಗಿವೆ. ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ಪುನಾರಚನೆ ನಡೆದಿದ್ದು, ಇದೀಗ ಕಾಂಗ್ರೆಸ್ ತನ್ನ ಬಳಿ ಇದ್ದ ಬಾಕಿಯಿದ್ದ ಆರು ಸಚಿವ ಸ್ಥಾನವನ್ನು ಭರ್ತಿ ಮಾಡಿಕೊಂಡಿದೆ.ಜೆಡಿಎಸ್ 2 ಸಚಿವ ಸ್ಥಾನ ಹಾಗೂ ಬಿಎಸ್ ಪಿಯ ಎನ್. ಮಹೇಶ್ ರಿಂದ ತೆರವಾಗಿರುವ ಒಂದು ಸಚಿವ ಸ್ಥಾನವನ್ನು ಭರ್ತಿ ಮಾಡದೇ ಹಾಗೆಯೇ ಉಳಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಆದರೆ ಇದೀಗ ಮಹೇಶ್ ರಿಂದ ತೆರವಾಗಿರುವ ಸಚಿವ ಸ್ಥಾನವನ್ನು ಜೆಡಿಎಸ್ ನ ಹಿರಿಯ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ನೀಡಲು ಪಕ್ಷ ಚಿಂತನೆ ನಡೆಸಿದೆ ಎನ್ನಲಾಗಿದೆ. ಉತ್ತರ ಕರ್ನಾಟಕದ ಹಿರಿಯ ರಾಜಕಾರಣಿ, ವೀರಶೈವ ಲಿಂಗಾಯ ಸಮುದಾಯದ ನಾಯಕ ಹಾಗೂ ವಿಧಾನಪರಿಷತ್ ಸದಸ್ಯರಾಗಿರುವ ಬಸವರಾಜ್ ಹೊರಟ್ಟಿ ಅವರೇ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಗೆ ಸೂಕ್ತ ವ್ಯಕ್ತಿ ಎಂದು ಹೇಳಲಾಗುತ್ತಿದ್ದು, ಮಾಜಿ ಪ್ರಧಾಣಿ ಹೆಚ್.ಡಿ.ದೇವೆಗೌಡರು ಹಾಗೂ ಸಿಎಂ ಕುಮಾರಸ್ವಾಮಿ ಅವರು ಹೊರಟ್ಟಿಗೆ ಶಿಕ್ಷಣ ಖಾತೆಯ ಜವಾಬ್ದಾರಿಯನ್ನು ನೀಡುತ್ತಾರೆ ಎಂದು ಹೇಳಲಾಗುತ್ತಿದೆ.
Comments