24 ಗಂಟೆಯಲ್ಲಿ ಮೈತ್ರಿ ಸರ್ಕಾರ ಪತನ ಎಂದ ಉಮೇಶ್ ಕತ್ತಿಗೆ ಸಖತ್ತಾಗಿಯೇ ಟಾಂಗ್ ಕೊಟ್ಟ ‘ಕೈ’ ಶಾಸಕ..!!
ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ಕೂಡ ಸರ್ಕಾರದ ಪತನದ ಬಗ್ಗೆ ವಿಪಕ್ಷಗಳು ಚಿಂತನೆಯನ್ನು ನಡೆಸುತ್ತಿವೆ…ಮುಂದಿನ 24 ಗಂಟೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.ಮಾಧ್ಯಮದವರ ಜೊತೆ ಮಾತನಾಡಿದ ಉಮೇಶ್ ಕತ್ತಿ ಮೈತ್ರಿ ಸರ್ಕಾರದ 15 ಶಾಸಕರು ನಮ್ಮ ಸಂಪರ್ಕದಲ್ಲಿದ್ದು ಈಗಲೇ ಅದನ್ನು ಬಹಿರಂಗಪಡಿಸುವುದಿಲ್ಲ.
ಇನ್ನು 24 ಗಂಟೆಯಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ನಂತರ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸವಾಲು ಹಾಕಿರುವ 24 ಗಂಟೆಯೊಳಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಿರುವ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ಮಾತು ಉಳಿಸಿಕೊಳ್ಳದಿದ್ದರೆ ರಾಜಿನಾಮೆ ಕೊಡ್ತಾರಾ ಎಂದು ಟಾಂಗ್ ಕೊಟ್ಟಿದ್ದಾರೆ.
Comments