ಬಿಗ್ ಬ್ರೇಕಿಂಗ್ : ಸಚಿವ ಡಿ ಕೆ ಶಿವಕುಮಾರ್ ಗೆ ಬಿಗ್ ಶಾಕ್..!! ಎದುರಾಯ್ತು ಮತ್ತೊಂದು ಸಂಕಷ್ಟ
ಇಂದು ಬೆಳಿಗ್ಗೆ ದಿಢೀರ್ ಅಂತಾ ಸ್ಯಾಂಡಲ್ ‘ವುಡ್’ಕೆಲ ಸ್ಟಾರ್’ಗಳ ಮೇಲೆ ಐಟಿ ದಾಳಿ ನಡೆದಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್ ಸೇರಿದಂತೇ ರಾಕಿಂಗ್ ಸ್ಟಾರ್ ನಟ ಯಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆ ಮೇಲೂ ಐಟಿ ರೈಡ್ ಆಗಿದೆ.ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್, ಸುದೀಪ್, ಪುನೀತ್ ರಾಜ್ ಕುಮಾರ್ ಯಶ್, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ವಿಜಯ್ ಕಿರಂಗದೂರು, ಮನೋಹರರ್ ಮನೆ ಮೇಲೆ ಬೆಳ್ಳಂಬೆಳ್ಳಗೆ ಐಟಿ ದಾಳಿ ನಡೆಸಿದ್ದಾರೆ. ಅಷ್ಟೆ ಅಲ್ಲದೆ ಇದರ ಬೆನ್ನಲೆ ಡಿಕೆಶಿ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಅದರ ಜೊತೆಗೆ ಸಚಿವ ಡಿಕೆ ಡಿ ಕೆ ಶಿವಕುಮಾರ್ ಅವರಿಗೂ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದು, ಅವರ ದೊಡ್ಡ ಆಲಹಳ್ಳಿಯಲ್ಲಿರುವ ಡಿ ಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರ ಮನೆಗೆ ಇಡಿ ಅಧಿಕಾರಿಗಳು ನೋಟಿಸ್ ಅಂಟಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಇವರುಗಳ ಮನೆ ಮೇಲೆ ದಾಳಿ ನಡೆಸಿದ್ದು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಪರೀಕ್ಷೆ ಮಾಡುತ್ತಿದ್ದಾರೆ. ಈಗಾಗಲೇ ಐಟಿ ದಾಳಿಯಿಂದ ಬೇಸತ್ತಿರುವ ಡಿಕೆಶಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
Comments