ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾ. ಬಿಜೆಪಿ ಅಭ್ಯರ್ಥಿ ಫೈನಲ್..!?

ಲೋಕ ಸಭಾ ಚುನಾವಣೆಗೆ ಹತ್ತಿರ ಬರುತ್ತಿದ್ದಂತೆ ಚುನಾವಣಾ ಕಸರತ್ತು ಜೋರಾಗಿಯೇ ನಡೆದಿದೆ.. ಇದೀಗ ಸದ್ಯ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಅಭ್ಯರ್ಥಿಯಾಗಿ ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಂ ರುದ್ರೇಶ್ ಬಿಜೆಪಿಯಿಂದ ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ಜಿಲ್ಲಾಧ್ಯಕ್ಷ ಎಂ ರುದ್ರೇಶ್ ಹೆಸರು ಪ್ರಸ್ತಾಪಿಸಲಾಗಿತ್ತು.
ಲೋಕಸಭಾ ಚುನಾವಣೆಗೆ ಸಿ.ಪಿ.ಯೋಗೇಶ್ವರ್ ಚುನಾವಣೆಯಲ್ಲಿ ಸ್ಪರ್ಧಿಸದ ಕಾರಣ ಎಂ.ರುದ್ರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಅಲ್ಲದೇ ಈಗಿನಿಂದಲೇ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಎಂಟು ಜಿಲ್ಲೆಯ ಜಿಲ್ಲಾಧ್ಯಕ್ಷರು ಸೇರಿ ಒಮ್ಮತದಿಂದ ಎಂ.ರುದ್ರೇಶ್ ಆಯ್ಕೆ ಮಾಡಿದ್ದಾರೆ. ರುದ್ರೇಶ್ ಆಯ್ಕೆ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಲಾಗುತ್ತಿದೆ. ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಜಿಜೆಪಿ ಅಧಿಕಾರಕ್ಕೆ ಬರುತ್ತೋ ಇಲ್ಲವೋ ಕಾದು ನೋಡಬೇಕಿದೆ.
Comments