ಲೋಕಸಭೆ ಚುನಾವಣೆ ಗೆಲ್ಲಲು ವರ್ಕೌಟ್ ಆಗುತ್ತಾ ಕಾಂಗ್ರೆಸ್’ನ ಮಾಸ್ಟರ್ ಪ್ಲಾನ್..!

ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ತಂತ್ರ ಪ್ರತಿತಂತ್ರಗಳ ನಡುವೆ ತಮ್ಮದೆ ಆದ ರೀತಿಯಲ್ಲಿಯೇ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದರ ನಡುವೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವು ದಾಖಲಿಸಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಭರ್ಜರಿ ಸಿದ್ದತೆಯನ್ನು ನಡೆಸಿದ್ದು ತನ್ನದೆ ಆದ ಹೊಸ ಹೊಸ ಫ್ಲಾನ್ ಗಳನ್ನು ಮಾಡಿಕೊಳ್ಳುತ್ತಿದೆ..ಇದೀಗ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮತ್ತೊಂದು ಮಾಸ್ಟರ್ ಫ್ಲಾನ್ ಮಾಡಿದೆ.
ಕಾಂಗ್ರೆಸ್ ಇದೀಗ ಮತದಾರರನ್ನು ಸೆಳೆಯಲು ಹೊಸ ಪ್ಲಾನ್’ವೊಂದನ್ನು ರೂಪಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ಪ್ರತಿಪಕ್ಷಗಳ ವೈಫಲ್ಯಗಳನ್ನು ಎತ್ತಿ ತೋರಿಸಲು ಕಾಂಗ್ರೆಸ್ ಬಿಗ್ ಪ್ಲಾನ್ ರೂಪಿಸಿದ್ದು, ರಾಜ್ಯದಲ್ಲಿ ಪಾಕ್ಷಿಕ ಪತ್ರಿಕೆಯೊಂದನ್ನು ಹೊರತೆರಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ಸೆಳೆಯಬಹುದೆಂಬ ಉದ್ದೇಶದಿಂದ ಜನವರಿ 26 ರ ಗಣರಾಜ್ಯೋತ್ಸವ ದಿನದಂದು ನೂತನ ಪತ್ರಿಕೆ ಲೋಕಾರ್ಪಣೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
Comments