ಭಾರಿ ವಿವಾದಕ್ಕೀಡಾದ ಜೆಡಿಎಸ್ ಸದಸ್ಯ..! ಕಾರಣ ಏನ್ ಗೊತ್ತಾ..?

ರಾಜಕೀಯ ನಾಯಕರು ಒಂದಲ್ಲ ಒಂದು ವಿವಾದಕ್ಕೆ ಈಡಾಗುತ್ತಿರುತ್ತಾರೆ. ಗೊತ್ತಿಲ್ಲದೆ ಕೆಲವೊಂದು ತಪ್ಪು ಮಾಡುತ್ತಾರೆ.. ಗೊತ್ತಿಲ್ಲದೆ ಮತ್ತೆ ಕೆಲವೊಂದಿಷ್ಟು ತಪ್ಪುಗಳನ್ನು ಮಾಡುತ್ತಾರೆ.. ಆದರೆ ಇದೀಗ ಬಿಬಿಎಂಪಿ ಸ್ಥಾಯಿ ಸಮಿತಿಗಳಿಗೆ ಹೊಸ ಅಧ್ಯಕ್ಷರ ಆಯ್ಕೆಯಾಗುವ ಮೊದಲೇ ಪಾಲಿಕೆ ಸದಸ್ಯರೊಬ್ಬರು ಪ್ರಮುಖ ಸ್ಥಾಯಿ ಸಮಿತಿಯೊಂದರ ಅಧ್ಯಕ್ಷ ಸ್ಥಾನದಲ್ಲಿ ಕೂತು ದೊಡ್ಡ ವಿವಾದಕ್ಕೆ ಒಳಗಾಗಿದ್ದಾರೆ... ಕಳೆದ ಡಿಸೆಂಬರ್ 14ರಂದು ನಡೆಯಬೇಕಿದ್ದಂತಹ ಚುನಾವಣೆ ಮುಂದೂಡಿಕೆ ಆಗಿದ್ದರಿಂದ ಪಾಲಿಕೆಯ ಎಲ್ಲಾ 12 ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳು ಖಾಲಿಯೇ ಇವೆ.
ಆದರೂ, ಪಾದರಾಯನಪುರ ವಾರ್ಡ್‌ನ ಜೆಡಿಎಸ್ ಪಕ್ಷದ ಸದಸ್ಯ ಇಮ್ರಾನ್ ಪಾಷಾ ಇತ್ತೀಚೆಗೆ ಶಿಕ್ಷಣ ಸ್ಥಾಯಿ ಸಮಿತಿ ಕಚೇರಿಯ ಅಧ್ಯಕ್ಷ ಸ್ಥಾನದಲ್ಲಿ ಕೂತು ತಮ್ಮ ಕೆಲ ಬೆಂಬಲಿಗರೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದ್ದು, ಸಾಕಷ್ಟು ವಿವಾದವನ್ನು ಉಂಟು ಮಾಡಿದೆ ಎನ್ನಲಾಗುತ್ತಿದೆ. ಇಮ್ರಾನ್ ಪಾಷಾ ಅವರ ಈ ವರ್ತನೆ ಸರಿಯಲ್ಲ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿದೆ. ಚುನಾವಣೆಯಲ್ಲಿ ಆಯ್ಕೆಯಾದ ಬಳಿಕ ಯಾವುದೇ ಸದಸ್ಯರು ತಾವು ಆಯ್ಕೆಯಾದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಕೂರಬೇಕು. ಅದನ್ನು ಬಿಟ್ಟು ಮೊದಲೇ ಈ ರೀತಿ ಆ ಸ್ಥಾನದಲ್ಲಿ ಕೂರುವುದು ಸದಸ್ಯರಿಗೆ ಶೋಭೆ ತರುವಂಥದ್ದಲ್ಲ. ಕೆಎಂಸಿ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಪಾಲಿಕೆ ಹಿರಿಯ ಸದಸ್ಯರೊಬ್ಬರು ತಿಳಿಸಿದ್ದಾರೆ. ಒಟ್ಟಾರೆ ಅಧ್ಯಕ್ಷ ಸ್ಥಾನಗಳು ಖಾಲಿ ಇದ್ದು ಕಾರಣ ಆ ಸೀಟಿನಲ್ಲಿ ಕೂತು ಅಧಿಕಾರ ನಡೆಸುತ್ತಿರುವುದರಿಂದ ಇದೀಗ ಜೆಡಿಎಸ್ ನಾಯಕ ಬಾರೀ ವಿವಾದಕ್ಕೆ ಒಳಗಾಗಿದ್ದಾರೆ.
Comments