ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದೇನು..?
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾರು ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದು ಖಚಿತವಾಗಿಲ್ಲ.. ಆದರೆ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಪಕ್ಷದ ವರಿಷ್ಠರು ಪ್ರಜ್ವಲ್ ರೇವಣ್ಣ ಅವರಿಗೆ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಈ ವಿಷಯದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ, ಹಾಸನ ಕ್ಷೇತ್ರದ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧನಿದ್ದು, ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಸಂತೋಷವಾಗಿದೆ. ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಹಾಸನ ಜಿಲ್ಲೆಯ ಜನರು ನನ್ನನು ಒಬ್ಬ ಮಗನಾಗಿ ಸ್ವೀಕರಿಸಿದ್ದಾರೆ. ನಾನೂ ಕೂಡ ಕೆಲಸ ಮಾಡಬೇಕು ಎನ್ನುವ ದೂರ ದೃಷ್ಟಿ ಇಟ್ಟುಕೊಂಡಿದ್ದೇನೆ. ಜಿಲ್ಲೆಯಲ್ಲಿ ಜೆಡಿಎಸ್ ಮಾಡಿರುವ ಅಭಿವೃದ್ಧಿ ಕೆಲಸಗಳು ನನ್ನ ಕೈ ಹಿಡಿಯಲಿವೆ ಎಂದು ತಿಳಿಸಿದರು. .. ಪಕ್ಷದ ಒಮ್ಮತದ ಅಭ್ಯರ್ಥಿಯಾದರೆ, ನಾನು ಸ್ಪರ್ಧಿಸಲು ಹಿಂಜರಿಯುವುದಿಲ್ಲ. ಜಿಲ್ಲೆಯ ಲೋಕಸಭಾ ಅಭ್ಯರ್ಥಿ ವಿಚಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಒಪ್ಪಂದ ಕುರಿತು ರಾಹುಲ್ ಗಾಂಧಿ ಮತ್ತು ದೇವೇಗೌಡರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ನಾಯಕರ ಆಕ್ಷೇಪದ ಬಗ್ಗೆ ದೊಡ್ಡವರು ನೋಡಿಕೊಳ್ಳುತ್ತಾರೆ. ಅವರ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಒಟ್ಟಾರೆ ವಿಧಾನ ಸಭಾ ಚುನಾವಣೆಯಲ್ಲಿ ಅಖಾಡಕ್ಕೆ ಇಳಿಯಲು ಸಾಧ್ಯವಾಗದ ಕಾರಣಕ್ಕೆ ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿಯಲು ಸಿದ್ದರಾಗಿದ್ದಾರೆ.
Comments