ಆಪರೇಷನ್ ಕಮಲದ ಸಂಪೂರ್ಣ ದಾಖಲೆ ಸದ್ಯದಲ್ಲೇ ಬಿಡುಗಡೆ ಮಾಡುತ್ತೇನೆ ಎಂದ ‘ಕೈ’ ಸಚಿವ..!!
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷದವರೆಲ್ಲಾ ಸಿಕ್ಕಾಪಟ್ಟೆ ಬ್ಯುಸಿಯಾಗಿ ಬಿಡುತ್ತಿದ್ದಾರೆ.. ಆದರೆ ಬಿಜೆಪಿಯವರು ಮಾತ್ರ ಅತೃಪ್ತ ಶಾಸಕರನ್ನು ಸೆಳೆಯುವಲ್ಲಿ ಗಮನ ಹರಿಸಿದ್ದಾರೆ.. ಇದೀಗ ಬಿಜೆಪಿಯವರು ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆಂದು ಸ್ವತಃ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಕೂಡ ಸ್ಪಷ್ಟಪಡಿಸಿದ್ದಾರೆ. , ಮೂರು ಮಂದಿ ಕಾಂಗ್ರೆಸ್ ಶಾಸಕರು ಮುಂಬೈನಲ್ಲಿ ಇದ್ದಾರೆ ಎಂದು ತಿಳಿಸಿದ್ದಾರೆ.
ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಶಾಸಕರು ಯಾರು ಮತ್ತು ಯಾವ ಹೋಟೆಲ್‌ನಲ್ಲಿ ಇದ್ದಾರೆ ಎಂಬುದು ಗೊತ್ತಿದೆ. ಎಲ್ಲಾ ದಾಖಲೆ ಇಟ್ಟುಕೊಂಡಿದ್ದೇವೆ. ಆಪರೇಷನ್ ಕಮಲದ ಸಂಪೂರ್ಣ ದಾಖಲೆ ಸದ್ಯದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಎಚ್ಚರಿಕೆಯನ್ನು ಕೂಡ ಡಿಕೆಶಿ ನೀಡಿದ್ದಾರೆ. ನಮ್ಮ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲವೂ ಕೂಡ ತಿಳಿದಿದೆ... ನಮ್ಮ ಶಾಸಕರು ಏನೇನು ನಡೆಸುತ್ತಿದ್ದಾರೆ ಎಂಬುದನ್ನು ಕೂಡ ನಮ್ಮೊಟ್ಟಿಗೆ ಹೇಳಿಕೊಂಡಿದ್ದಾರೆ. ನಾನಾಗಿದ್ದರೆ ೨೪ ಗಂಟೆಯಲ್ಲಿ ಎಲ್ಲವನ್ನೂ ಬಹಿರಂಗ ಗೊಳಿಸುತ್ತಿದ್ದೆ ಎಂದು ಡಿಕೆಶಿ ಕಿಡಿಕಾರಿದರು...
Comments